
• ಮೈಸೂರು ಮತ್ತು ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ., ಮಾರ್ಚ್ 28ರಂದು ರಾತ್ರಿ 9.35ಕ್ಕೆ ಮೈಸೂರಿನಿಂದ ರೈಲು ಹೊರಡಲಿದ್ದು, ಮರುದಿನ• ಸಂಜೆ 4.15ಕ್ಕೆ ಕಾರವಾರ ತಲುಪಲಿದೆ. ಅಂದು ರಾತ್ರಿ 11.30ಕ್ಕೆ ಕಾರವಾರದಿಂದ ಹೊರಟು ಮಾರ್ಚ್ 30ಕ್ಕೆ ಸಂಜೆ 4.40ಕ್ಕೆ ಮೈಸೂರು ತಲುಪಲಿದೆ. 21 ಬೋಗಿಗಳ ಈ ವಿಶೇಷ ರೈಲು• ಮಂಡ್ಯ, ಕೆಎಸ್‌ಆರ್ ಬೆಂಗಳೂರು, ಯಶವಂತಪುರ, ಕುಣಿಗಲ್, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರುಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರಸ್ತೆ ಮತ್ತು• ಅಂಕೋಲಾ ನಿಲ್ದಾಣಗಳಲ್ಲಿ ನಿಲುಗಡೆ ಗೊಳ್ಳಲಿದೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.