
ಸಕಲೇಶಪುರ: ತಾಲೂಕಿನ ಹಾನಬಾಳು ಹೋಬಳಿಯ ಕಾಡುಮನೆ ಗ್ರಾಮ ವ್ಯಾಪ್ತಿಯಲ್ಲಿನ 22.03 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವುಗೊಳಸಿರುವ ಅರಣ್ಯ ಇಲಾಖೆ ಸುಮಾರು 10 ಕೋಟಿ ರೂ. ಮೌಲ್ಯದ ಭೂಮಿ ವಶಕ್ಕೆ ಪಡೆದಿದೆ.ಕಾಡುಮನೆ ಗ್ರಾಮದ ಸರ್ವೆ ಸಂಖ್ಯೆ 76ರ ಮೂರ್ಕಣ್ಣು ಗುಡ್ಡದ ಸೆಕ್ಷನ್ 4ರ ಅರಣ್ಯ ಪ್ರದೇಶದಲ್ಲಿ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಲಾಗಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.

ಮನೋಹರ್ ಅಯ್ಯರ್ ಎಂಬುವವರು ಈ ಭೂಮಿಯನ್ನು ಅಕ್ರಮವಾಗಿ ಬಳಸುತ್ತಿದ್ದ ಹಿನ್ನೆಲೆಯಲ್ಲಿ, ಸಕಲೇಶಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅರಣ್ಯ ಕಾಯ್ದೆ ಸೆಕ್ಷನ್ 64A ಅಡಿಯಲ್ಲಿ ಒತ್ತುವರಿ ತೆರವಿಗೆ ನಿರ್ಧಾರ ಕೈಗೊಂಡಿದ್ದರು. ಅದರಂತೆ ಇಂದು ಅಧಿಕಾರಿಗಳು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಒತ್ತುವರಿಗೊಳಿಸಿದರು.ಹಾಸನ ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ, ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಮಾರ್ಗದರ್ಶನದಲ್ಲಿ ಸಕಲೇಶಪುರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿ ಹೇಮಂತ್ ನೇತೃತ್ವದಲ್ಲಿ ಈ ತೆರವು ಕಾರ್ಯಾಚರಣೆ ನಡೆಸಲಾಯಿತು.