ಸಕಲೇಶಪುರ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ತಾಲ್ಲೂಕು ಎಪಿಎಂಸಿ ಮಾಜಿ ನಿರ್ದೇಶಕರಾದ ಬಾಗರಹಳ್ಳಿ ನಿಂಗಪ್ಪರವರು ಇಂದು ಬೆಳಿಗ್ಗೆ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾದ ಮುರಳಿ ಮೋಹನ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಂತಿಮ ದರ್ಶನಕ್ಕಾಗಿ ಊರಿಗೆ ಸ್ವಂತ ಮನೆಯಲ್ಲಿ ವ್ಯವಸ್ಥೆ ಮಾಡಲಾಗಿದೆ, ನಾಳೆ ಮಧ್ಯಾಹ್ನ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.