
ಹುಬ್ಬಳ್ಳಿ: ಭೀಕರ ರಸ್ತೆ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಹೊರವಲಯದಲ್ಲಿ ನಡೆದಿದೆ.ಸುಜಾತಾ ಹಿರೇಮಠ (60), ಗಾಯತ್ರಿ ಮಾಂತನಮಠ (67), ಶಕುಂತಲಾ ಹಿರೇಮಠ (72) ಸಂಪತಕುಮಾರಿ ಕಲ್ಮಠ (63) ಮೃತರು ಎಂದು ತಿಳಿದು ಬಂದಿದೆ.ಹಾವೇರಿಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ, ನೂಲ್ವಿ ಕ್ರಾಸ್ ಬಳಿಯ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ಪಕ್ಕದ ಡಿವೈಡರ್‌ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.