ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು -ವಿ.ಸೋಮಣ್ಣ ಘೋಷಣೆ

ಬೆಂಗಳೂರು: ರಾಜ್ಯದ ಹಲವಾರು ಪುಣ್ಯ ಕ್ಷೇತ್ರಗಳಿಗೆ ಬರುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಸುಬ್ರಮಣ್ಯಕ್ಕೆ ಏ.12 ರಿಂದ ಹೊಸ ರೈಲು ಸಂಚರಿಸಲಿದೆ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ.ತುಮಕೂರಿನಲ್ಲಿ ಇಂದು ರೈಲ್ವೇ ಗೇಟ್ ಮೇಲ್ವೇತುವೆಗೆ ಗುದ್ದಲಿ ಪೂಜೆ ನಡೆಸಿದ ಅವರು, 12 ರಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಒಂದು ಹೊಸ ರೈಲು ಬಿಡುತ್ತಿದ್ದೇವೆ. ದಿನಕ್ಕೆ ನಾಲ್ಕು ಬಾರಿ ಹೋಗಿ ಬರುವಂತಹ ಕೆಲಸ ಆಗಲಿದೆ ಎಂದು ತಿಳಿಸಿದರು.ಅಲ್ಲದೇ 650 ಕೋಟಿ ರೂ. ವೆಚ್ಚದ 22 ಮೇಲ್ಪತುವೆ ಮತ್ತು ಕೆಳಸೇತುವೆ ಕಾಮಗಾರಿ ಪ್ರಾರಂಭ ಮಾಡಲಾಗುತ್ತಿದ್ದು ಬಟವಾಡಿ ಗೇಟ್ನಲ್ಲಿ ಇವತ್ತು 27 ಕೋಟಿ ರೂ. ವೆಚ್ಚದಲ್ಲಿ ಕೆಲಸ ಆರಂಭ ಮಾಡಲಾಗಿದೆ. ಬಡ್ಡಿಹಳ್ಳಿ ಬಳಿ 43 ಕೋಟಿ ರೂ. ವೆಚ್ಚದಲ್ಲಿ ಮೈದಾಳದ ಬಳಿ 51 ಕೋಟಿ ರೂ. ವೆಚ್ಚದಲ್ಲಿ ಮೇಲ್ಪತುವೆ ಕಾಮಗಾರಿ ಪ್ರಗತಿಯಲ್ಲಿದೆ.ಈಗಾಗಲೇ 23 ಕಾಮಗಾರಿಗಳ ಪೈಕಿ 10ಕ್ಕೆ ಚಾಲನೆ ನೀಡಲಾಗಿದೆ. ಇನ್ನು ಉಳಿದಂತೆ ಹಂತ ಹಂತವಾಗಿ ಕೆಲಸವನ್ನು ಪ್ರಾರಂಭ ಮಾಡಲಾಗುತ್ತದೆ. ಮೋದಿಯವರು ಮೂರನೆಯ ಬಾರಿಗೆ ಪ್ರಧಾನಿಯಾಗಿ ಬಂದ ಮೇಲೆ ರೈಲ್ವೇ ಇಲಾಖೆಗೆ ಒಂದು ಕಾಯಕಲ್ಪ ನೀಡಿದ್ದಾರೆ ಎಂದು ಸೋಮಣ್ಣ ಹೇಳಿದರು.

Leave a Reply

Your email address will not be published. Required fields are marked *

error: Content is protected !!