






ಸಕಲೇಶಪುರ:- ತಾಲ್ಲೂಕಿನ ಗ್ಯಾರೆಂಟಿ ಯೋಜನಾ ಸಮಿತಿಯ ಕಚೇರಿಯಲ್ಲಿ ಬಾಬಾ ಸಾಹೇಬರ 134ನೇ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಅತ್ಯಂತ ಸಂಭ್ರಮದಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮ ದಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಮತ್ತು ಗ್ಯಾರಂಟಿ ಯೋಜನ ಅನುಷ್ಠಾನ ಪ್ರಾಧಿಕಾರ ಸಮಿತಿಯ ಅಧ್ಯಕ್ಷರು ಆದ ಮುರಳಿ ಮೋಹನ್ ಸಂವಿಧಾನ ಶಿಲ್ಪಿ ಡಾಕ್ಟರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ವಿಶೇಷ ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಾಬಾ ಸಾಹೇಬ್ ಅಭಿಮಾನಿಗಳು ಹಾಗೂ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಹಾಜರಿದ್ದರು.