
ಸಕಲೇಶಪುರ: ವಾಯು ವಿಹಾರಕ್ಕೆ ತೆರಳಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು ರಾಜು(68) ಗಾಯಗೊಂಡವರಾಗಿದ್ದಾರೆ.ಕೂಡಲೆ ಸ್ಥಳೀಯರ ನೆರವಿನಿಂದ ತಾಲೂಕು ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಸ್ಥಳಕ್ಕೆ ವಲಯ ಅರಣ್ಯ ಅಧಿಕಾರಿ ಹೇಮಂತ್ ಕುಮಾರ್ ಹಾಗೂ ಸಿಬ್ಬಂದಿಯವರು ಭೇಟಿ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.