
ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್‌ದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮೇ ತಿಂಗಳಿಂದ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಜೊತೆಗೆ ರಾಗಿ ಮತ್ತು ಜೋಳವನ್ನು ಕೂಡಾ ವಿತರಿಸಲು ನಿರ್ಧರಿಸಲಾಗಿದೆ.ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ರಾಜ್ಯದ ಪ್ರತಿ ವ್ಯಕ್ತಿಗೂ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದಿಂದ ಒಟ್ಟು 10 ಕೆಜಿ ಅಕ್ಕಿ ಫ್ರೀ ಆಗಿ ವಿತರಿಸಲಾಗುತ್ತದೆ.ಇದೀಗ ಪಡಿತರ ಚೀಟಿದಾರರಿಗೆ ಎರಡು ಅಥವಾ ಮೂರು ಕೆಜಿ ರಾಗಿ ಅಥವಾ ಜೋಳ ಕೂಡಾ ನೀಡಲು ಆಹಾರ ಇಲಾಖೆ ನಿರ್ಧರಿಸಿದೆ.ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ. ಕೆಲವು ಭಾಗದಲ್ಲಿ ರಾಗಿ ಮತ್ತೆ ಕೆಲವು ಕಡೆ ಜೋಳ ನೀಡಲಾಗುವುದು ಎನ್ನಲಾಗಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು 2 ಕೆಜಿ ಅಕ್ಕಿ ನೀಡಲು ನಿರ್ಧರಿಸಲಾಗಿದೆ.